ವಿಭಾಗದ ಕುರಿತು
ಕಂಪ್ಯೂಟರ್ ಸಾಯಿನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗವನ್ನು 2002-2003ರ ಶೈಕ್ಷಣಿಕ ವರ್ಷದಲ್ಲಿ ಸ್ಥಾಪಿಸಲಾಗಿದೆ. ಈ ವಿಭಾಗವು ದೇಶಾದ್ಯಂತ ಮತ್ತು ವಿದೇಶಗಳಿಂದ ಅತ್ಯುತ್ತಮ ಎಂಜಿನಿಯರಿಂಗ್ ಆಕಾಂಕ್ಷಿಗಳ ಆಕರ್ಷಣೆಯ ಕೇಂದ್ರವಾಗಿದೆ.. ಉದ್ಯಮ ಮತ್ತು ಸಮಾಜದ ಅಗತ್ಯಗಳನ್ನು ಪೂರೈಸಲು ಸೂಕ್ತವಾಗಿರುವ ನುರಿತ ಮತ್ತು ಸಮರ್ಥ ಕಂಪ್ಯೂಟರ್ ಎಂಜಿನಿಯರಗಳು ಮತ್ತು ಉದ್ಯಮಿಗಳನ್ನು ಉತ್ಪಾದಿಸುವಲ್ಲಿ ಯಶಸ್ವಿಯಾಗಿದೆ. ವಿಭಾಗವು ಶೈಕ್ಷಣಿಕ, ಸಂಶೋಧನೆ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಸರ್ವತೋಮುಖ ಅಭಿವೃದ್ಧಿಗೆ ಬೆಂಬಲಿಸಲು ಸಾಕಷ್ಟು ಮೂಲಸೌಕರ್ಯಗಳನ್ನು ಹೊಂದಿದೆ. ವಿಭಾಗವು ಪ್ರಧಾನ ಕಚೇರಿ, ಬೆಳಗಾವಿ ಮತ್ತು ಕಲಬುರಗಿ, ಮೈಸೂರು ಮತ್ತು ಮುದ್ದೇನಹಳ್ಳಿಯಲ್ಲಿರುವ ಸ್ನಾತಕೋತ್ತರ ಕೇಂದ್ರಗಳಲ್ಲಿ ಸ್ನಾತಕೋತ್ತರ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು ನೀಡುತ್ತದೆ. ಸ್ನಾತಕೊತ್ತರ ಕೇಂದ್ರಗಳಲ್ಲಿ ಸೂಕ್ತ ಪರಿಸರ ಮತ್ತು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಹೊಂದಿದ್ದು, ಕಲಿಕೆ ಮತ್ತು ಸಂಶೋಧನೆಗೆ ಅನುಕೂಲವಾಗುವಂತೆ ಇವೆ. ವಿಭಾಗವು 2020-21ನೇ ಶೈಕ್ಷಣಿಕ ವರ್ಷದಲ್ಲಿ ಕಂಪ್ಯೂಟರ್ ಸಾಯಿನ್ಸ್ ಮತ್ತು ವ್ಯವಹಾರ ವ್ಯವಸ್ಥೆಗಳಲ್ಲಿ ಬಿ.ಟೆಕ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಟಿಸಿಎಸ್ ಮತ್ತು ವಿಟಿಯು ಸಹಿ ಮಾಡಿದ ಒಡಂಬಡಿಕೆ ಪ್ರಕಾರ ಈ ಕಾರ್ಯಕ್ರಮವನ್ನು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಸಹಯೋಗಿಸಲ್ಪಟ್ಟಿದೆ.
ವಿಭಾಗದ ಅಧ್ಯಾಪಕರು ಕಂಪ್ಯೂಟರ್ ವಿಜ್ಞಾನದ ಎಲ್ಲಾ ಪ್ರಮುಖ ಕ್ಷೇತ್ರಗಳಲ್ಲಿ ಕಾರ್ಯೋನ್ಮುಖರಾಗಿದ್ದುಮತ್ತು ಮಾಹಿತಿ ತಂತ್ರಜ್ಞಾನದ ವಿವಿಧ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕ್ಲೌಡ್ ಕಂಪ್ಯೂಟಿಂಗ್, ಕಂಪ್ಯೂಟರ್ ನೆಟ್‌ವರ್ಕಿಂಗ್, ಜ್ಞಾನಾಧಾರಿತ ಇಂಟೆಲಿಜೆಂಟ್ ಸಿಸ್ಟಮ್ಸ್, ಕಂಪ್ಯೂಟರ್ ವಿಷನ್, ಇಮೇಜ್ ಪ್ರೊಸೆಸಿಂಗ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲಾಗುತ್ತದೆ. ವಿ ಜಿ ಎಸ್ ಟಿ/ವಿತಾವಿ ನಿಂದ ಅನುದಾನಿತ ಯೋಜನೆಗಳನ್ನು ಇಲಾಖೆಯ ವಿವಿಧ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಅಧ್ಯಾಪಕರು ವಿವಿಧ ಸಲಹಾ ಯೋಜನೆಗಳಲ್ಲಿ ಮತ್ತು ವಿಶ್ವವಿದ್ಯಾಲಯದ ಆಂತರಿಕ ಸಾಫ್ಟ್‌ವೇರ್ ಸೇವೆಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ವಿಭಾಗವು ವಿದ್ಯಾರ್ಥಿ ಕೇಂದ್ರಿತ ನೀತಿಗಳನ್ನು ಅನುಸರಿಸಲಾಗುತ್ತಿದ್ದು ಮತ್ತು ವಿದ್ಯಾರ್ಥಿಗಳು ಹೊಸ ಮತ್ತು ಸಾಮಾಜಿಕವಾಗಿ ಪ್ರಸ್ತುತವಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ. ಸಂಯೋಜಿತ ವಿಧಾನದಲ್ಲಿ ಪರಿಣಾಮಕಾರಿ ಬೋಧನೆ ಕಲಿಕೆಗಾಗಿ ಅಧ್ಯಾಪಕರು ಆಧುನಿಕ ತಂತ್ರಜ್ಞಾನ ಶಕ್ತಗೊಂಡ ಶಿಕ್ಷಣ ಸಾಧನಗಳನ್ನು ಬಳಸುತ್ತಿದ್ದಾರೆ.. ವಿಭಾಗದ ಹಳೆಯ ವಿದ್ಯಾರ್ಥಿಗಳು ಹೆಸರಾಂತ ಐಟಿ ಕೈಗಾರಿಕೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಡಾ.ಎಸ್.ಎ.ಅಂಗಡಿ
ಚೇರಪರ್‍ಸನ್
ಕಂಪ್ಯೂಟರ್ ಸಾಯಿನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ
ವಿತಾವಿ-ಬೆಳಗಾವಿ -೫೯೦೦೧೮
ಮೆಲ್:- chair.cse@vtu.ac.in

